ಬಳ್ಳಾರಿ: ಜಿಲ್ಲಾ ಮಟ್ಟದ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ 14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಪಡೆಯಿರಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್

A B
By A B
ಬಳ್ಳಾರಿ: ಜಿಲ್ಲಾ ಮಟ್ಟದ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ 14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಪಡೆಯಿರಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್
WhatsApp Group Join Now
Telegram Group Join Now

ಬಳ್ಳಾರಿ,ಮಾ.12
ಜಿಲ್ಲೆಯಲ್ಲಿನ 14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ಈ ಲಸಿಕೆ ಅತ್ಯಂತ ಉಪಯುಕ್ತವಾಗಿದ್ದು, ಜಿಲ್ಲೆಯಲ್ಲಿ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಹೆಚ್.ಪಿ.ವಿ(ಹೂಮನ್ ಪ್ಯಾಪಿಲೋಮ ವೈರಸ್)ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು, ಅಸುರಕ್ಷಿತ ಲೈಂಗಿಕ ಸಂಪರ್ಕದಿAದ ಹರಡುವ ಹೂಮನ್ ಪ್ಯಾಪಿಲೋಮ ವೈರಸ್ (ಹೆಚ್.ಪಿ.ವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾನ್ಸರ್ ಆಗಿ ಬದಲಾಗುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವುದನ್ನು ತಡೆಯಲು ಹೆಚ್.ಪಿ.ವಿ ಲಸಿಕೆಯನ್ನು ಸರ್ಕಾರದ ಮಾರ್ಗಸೂಚಿಯಡಿ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹಾಕಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್‌ಪಿವಿ ಲಸಿಕೆ ಸಹಕಾರಿಯಾಗಿದ್ದು, ಈ ಕುರಿತು ಸಮುದಾಯಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಈ ಲಸಿಕಾ ಅಭಿಯಾನ 90 ದಿನಗಳವರೆಗೆ ನಡೆಯಲಿದ್ದು, 14 ವರ್ಷದ ಎಲ್ಲಾ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಲಸಿಕೆ ಪಡೆಯುವುದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ಶೇ.99 ರಷ್ಟು ತಡೆಯಬಹುದು ಎಂದು ಹೇಳಿದರು.
ಲಸಿಕೆ ಪಡೆಯಲು ಬರುವ ಪಲಾನುಭವಿಗಳು ಖಡ್ಡಾಯವಾಗಿ ಪೋಷಕರನ್ನು ಜೊತೆಯಲ್ಲಿ ಕರೆದುಕೊಂಡು ಬರಬೇಕು. ಜೊತೆಗೆ ಸೂಕ್ತ ಗುರುತಿನ ಚೀಟಿ (ಜನನ ಪ್ರಮಾಣ ಪತ್ರ) ತೆಗೆದುಕೊಂಡು ಬರಬೇಕು. ಮುಖ್ಯವಾಗಿ ಊಟ ಸೇವನೆ ಮಾಡಿರಬೇಕು. ಕ್ಯಾನ್ಸರ್ ಮುಕ್ತ ನಾಳೆಗಾಗಿ ಲಸಿಕೆಯ ಸುರಕ್ಷೆ ಹೊಂದಬೇಕು ಎಂದು ತಿಳಿಸಿದರು.
ಇದೇ ವೇಳೆ ಗಣ್ಯರು ಸಾಂಕೇತಿಕವಾಗಿ 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ಲಸಿಕೆ ನೀಡಿದರು. ಬಳಿಕ ಲಸಿಕೆ ಪಡೆದ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಸಾತ್ವಿಕ್, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸಂಸ್ಥೆಯ ವಿಜಯಲಕ್ಷಿö್ಮ, ನರ್ಸಿಂಗ್ ಅಧೀಕ್ಷಕಿ ವಿಮಲ, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಮ್, ಶಾರದ ವಿದ್ಯಾಪೀಠ ಮುಖ್ಯಗುರುಗಳಾದ ಕವಿತ ವಾದಿರಾಜ, ಡಿಎನ್‌ಒ ಗಿರೀಶ್, ಮನೋಹರ್ ಸೇರಿದಂತೆ ನರ್ಸಿಂಗ್ ಅಧಿಕಾರಿಗಳು, ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

WhatsApp Group Join Now
Telegram Group Join Now
Share This Article