ಬೆಂಗಳೂರು, ಮೇ 15: ಹಲವಾರು ಗ್ರಾಹಕ ಸ್ನೇಹಿ ಕ್ರಮಗಳ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಯತ್ನಿಸುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ ಇದೀಗ ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದೆ. ಆ ಮೂಲಕ ಗ್ರಾಹಕರ ಸಮಸ್ಯಗಳಿಗೆ ಶೀಘ್ರದಲ್ಲೇ ಸ್ಪಂದಿಸುವ ಭರವಸೆ ನೀಡಿದೆ. ಬೆಸ್ಕಾಂ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದ್ದು, ಆ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ಸಮಸ್ಯೆಗಳನ್ನು ಟೆಕ್ಸ್ಟ್, ಫೋಟೋ, ವಿಡಿಯೋ ಮೂಲಕ ತಿಳಿಸಿ: ಬೆಸ್ಕಾಂ ಜಿಲ್ಲಾವಾರು ವಾಟ್ಸ್ಯಾಪ್ ಗ್ರೂಪ್ ಶುರು

‘ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹಾರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ’ ಎಂದು ಎಕ್ಸ್ ಸಂದೇಶದಲ್ಲಿ ಬೆಸ್ಕಾಂ ಮನವಿ ಮಾಡಿದೆ.
ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳಿದ್ದು, ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ, ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹಾರ ಪಡೆಯಿರಿ ಎಂದು ಬೆಸ್ಕಾಂ ಗ್ರಾಹಕರಿಗೆ ಸಲಹೆ ನೀಡಿದೆ.