ಬೆಂಗಳೂರು,ಮೇ 27: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಜಾಮೀನನ ಮೇಲೆ ಶಾಸಕ ಎಚ್ಡಿ ರೇವಣ್ಣ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪತ್ನಿ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ಮುಂಜಾಗ್ರತಾವಾಗಿ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು… ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 28ಕೆ ಮುಂದೂಡಿದೆ.