ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ಮತ್ತೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.