*ಬೈರದೇವನಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ* 

MK HasiruKranti
*ಬೈರದೇವನಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ* 
WhatsApp Group Join Now
Telegram Group Join Now
ಬಳ್ಳಾರಿ,ಏ.15: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬೈರದೇವನಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿತು.
ಶಾಸಕ ಬಿ.ನಾಗೇಂದ್ರರ ಪರವಾಗಿ ಕಾಂಗ್ರೆಸ್ ನಾಯಕ ಹಾಗೂ ಅವರ ಸಹೋದರ ವೆಂಕಟೇಶ್ ಪ್ರಸಾದ್ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾನ್ಯ ಮುಖ್ಯಮಂತ್ರಿ ವಿವೇಚನ ನಿಧಿ ಅಡಿಯಲ್ಲಿ ಸುಮಾರು 1.65 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.
ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದೆ. ಇದರ ಮೂಲಕ ಉತ್ತಮ ರಸ್ತೆ ವ್ಯವಸ್ಥೆ ಕಲ್ಪಿಸುವುದು ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು.
ಕಾಮಗಾರಿಗಳು ಪೂರ್ಣಗೊಂಡ ನಂತರ ಬೈರದೇವನಹಳ್ಳಿ ಗ್ರಾಮದಲ್ಲಿ ಸಂಚಾರ ಸೌಲಭ್ಯ ಸುಧಾರಣೆಯಾಗುವುದರ ಜೊತೆಗೆ ಉತ್ತಮ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ವೆಂಕಟೇಶ್ ಪ್ರಸಾದ್ ಹೇಳಿದರು.
ನಂತರ ವೆಂಕಟೇಶ್ ಪ್ರಸಾದ್ ಅವರು ಮುರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಶಾಲಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಗೋವರ್ಧನ ರೆಡ್ಡಿ, ನಾಗರಾಜ್, ಬಿ.ದುರ್ಗಣ್ಣ, ರಾಜೇಶ್, ವಿಎನ್.ಶ್ರೀನಾಥ್, ಬೊಯಾ ರಾಮಾಂಜಿನಿ, ಸಿಂಧುವಾಳ ಗಾದಿಲಿಂಗನಗೌಡ, ಶೇಖಲಿಂಗ, ಗಾದಿಲಿಂಗ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article