ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 28ರಂದು ಶೋ ಪ್ರಾರಂಭ ಆಗುತ್ತಿದೆ. ಈ ಶೋಗಾಗಿ ಫ್ಯಾನ್ಸ್ ಕಾದಿದ್ದಾರೆ. ಇದರ ಪ್ರೋಮೋ ಸೆಪ್ಟೆಂಬರ್ 2ರಂದು ರಿಲೀಸ ಆಯಿತು. ಈ ಪ್ರೋಮೋ ಶೂಟ್ನ ಝಲಕ್ನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಬಿಗ್ ಬಾಸ್ 12 ಪ್ರೋಮೋ ಹೊರಬಿದ್ದ ಬೆನ್ನಲ್ಲೇ ಈ ಬಾರಿ ಮನೆಯೊಳಗೆ ಹೋಗುವ ಸ್ಪರ್ಧಿಗಳು ಇವರೇ ಎಂಬ ಗುಸುಗುಸು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದು ಯಾರೆಲ್ಲ ಅಂದ್ರೆ, ಈ ಸಾಲಿನಲ್ಲಿ ಕೇಳಿಬರುತ್ತಿರುವ ಮೊದಲ ಹೆಸರು ಸಾಗರ್ ಬಿಳಿಗೌಡ. ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ್ ಅವರ ಸತ್ಯ ಸೀರಿಯಲ್‌ನಲ್ಲಿ ಸಾಗರ್ ಹೀರೋ ಆಗಿ ಕಾಣಿಸಿಕೊಂಡಿದ್ದರು. ಇನ್ನು ಎರಡನೇ ಹೆಸರು ಶ್ವೇತಾ ಪ್ರಸಾದ್. ಆರಂಭದಲ್ಲಿ ಧಾರಾವಾಹಿಗಳ ಮೂಲಕ ಶ್ವೇತಾ ಗಮನ ಸೆಳೆದವರು. ಆ ಬಳಿಕ ಅವರು ಆರ್ಜೆ ಪ್ರದೀಪ್ ಜೊತೆ ವಿವಾಹ ಮಾಡಿಕೊಂಡಿದ್ದಾರೆ.
ಝೀ ಕನ್ನಡದಲ್ಲಿ ಪ್ರಸಾರ ಕಂಡ ಭರ್ಜರಿ ಬ್ಯಾಚುಲರ್ಸ್ ಸೀಸನ್ 2ನ ಸ್ಪರ್ಧಿ ಅನನ್ಯಾ ಅಮರ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗಿದೆ. ಇನ್ನು ಪತ್ರಿಕೋದ್ಯಮ ಕೋಟಾದಿಂದ ಈ ಬಾರಿ ಜಯಪ್ರಕಾಶ್ ಶೆಟ್ಟಿ ಬಿಗ್ ಬಾಸ್ಗೆ ಬರಲಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ.
ಇವರ ಜೊತೆಗೆ ಕೆಜಿಎಫ್ ಸಿನಿಮಾದ ಮೂಲಕ ದೇಶಾದ್ಯಂತ ಸದ್ದು ಮಾಡಿದವರು ಅರ್ಚನಾ ಜೋಯಿಸ್ ಬಿಗ್ ಬಾಸ್ಗೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಡಾ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಕೂಡ ಈ ಪಟ್ಟಿಯಲ್ಲಿ ಇದ್ದಾರೆ. ಸೀತಾ ರಾಮ ಸೀರಿಯಲ್‌ನಲ್ಲಿ ನಟಿಸಿದ್ದ ಗಗನ್ ದೊಡ್ಮನೆಯೊಳಗೆ ಕಾಲಿಡಬಹುದು ಎಂಬ ಗುಸು-ಗುಸು ಇದೆ. ಜೊತೆಗೆ ಇದೇ ಧಾರಾವಾಹಿಯಲ್ಲಿ ವಿಲನ್ ಪಾತ್ರ ಮಾಡಿದ ದಿವಂಗತ ನಟ ಲೋಕೇಶ್ – ಗಿರಿಜಾ ಲೋಕೇಶ್ ದಂಪತಿಯ ಪುತ್ರಿ ಪೂಜಾ ಲೋಕೇಶ್ ಕೂಡ ಮನೆಯೊಳಗೆ ಕಾಲಿಡಬಹುದು. ನೂರು ಜನ್ಮಕೂ, ಗೀತಾ ಸೀರಿಯಲ್‌ನಲ್ಲೂ ನಟಿಸಿದ್ದ ಧನುಷ್ ಗೌಡ ಈ ಬಾರಿ ಬಿಗ್ ಬಾಸ್ ಸ್ಪರ್ಧಿಯಾಗಬಹುದು ಎನ್ನಲಾಗಿದೆ.