ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

Ravi Talawar
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ
WhatsApp Group Join Now
Telegram Group Join Now

ಪಾಟ್ನಾ, ನವೆಂಬರ್ 17: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್​ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದ್ದು, ಇದೀಗ ಸಿಎಂ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‌ಡಿಎ ನಾಲ್ಕನೇ ಮೂರು ಭಾಗದಷ್ಟು ಬಹುಮತವನ್ನು ಗಳಿಸಿತ್ತು.

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದೆ. ರಾಜಭವನದಲ್ಲಿ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.19 ರಂದು ವಿಧಾನಸಭೆ ವಿಸರ್ಜನೆಗೊಳ್ಳಲಿದೆ.ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ, ಬಿಹಾರ ಸಚಿವ ಸಂಪುಟ ಸೋಮವಾರ ವಿಧಾನಸಭೆಯನ್ನು ವಿಸರ್ಜಿಸುವ ಪ್ರಸ್ತಾವನೆಯನ್ನು ಅಂಗೀಕರಿಸಿತು.

ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರದ ಅಂತಿಮ ಸಚಿವ ಸಂಪುಟ ಸಭೆಯ ನಂತರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದರು. ಬಿಹಾರ ಚುನಾವಣಾ ಫಲಿತಾಂಶಗಳಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ನಂತರ, ರಾಜ್ಯದಲ್ಲಿ ಹೊಸ ಸರ್ಕಾರ ರಚಿಸುವ ಪ್ರಕ್ರಿಯೆಯು ವೇಗಗೊಂಡಿದೆ. ಹೊಸ ಸರ್ಕಾರ ರಚಿಸುವ ಔಪಚಾರಿಕತೆಗಳು ಪೂರ್ಣಗೊಳ್ಳುತ್ತಿವೆ.

WhatsApp Group Join Now
Telegram Group Join Now
Share This Article