ಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ: ಬಿಜೆಪಿ ಆರೋಪ

Ravi Talawar
ಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ:  ಬಿಜೆಪಿ ಆರೋಪ
WhatsApp Group Join Now
Telegram Group Join Now

ಬೆಂಗಳೂರು,16: ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪ ಮಾಡಿದೆ.

ಮತದಾರರಿಗೆ ಹಂಚಲು ತಂದಿದ್ದು ಎನ್ನಲಾದ ವಸ್ತುಗಳಿದ್ದ ವೀಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

ಕನ್ನಡಿಗರ ತೆರಿಗೆಯನ್ನು ಲೂಟಿ ಹೊಡೆದ #ATMSarkara ಅದನ್ನು ಅದನ್ನು ಚುನಾವಣೆಗಳಲ್ಲಿ ಅಕ್ರಮವಾಗಿ ಹಂಚಲು ಹೋಗಿ ಸಿಕ್ಕಿಬಿದ್ದಿದೆ ಎಂದು ಬಿಜೆಪಿ ಟ್ವಿಟರ್ ಖಾತೆಯಲ್ಲಿ ಬರೆದಿದೆ.

“ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿ ಗೌಡ ಅವರು ಸುಮಾರು 20 ಸಾವಿರಕ್ಕೂ ಅಧಿಕ ಉಡುಗೊರೆಗಳನ್ನು ಕೊರಿಯರ್ ಮೂಲಕ ಕಳಿಸಲು ಸಂಚು ರೂಪಿಸಿದ್ದರು ವಿದ್ಯಾವಂತ ಪದವೀಧರರಿಗೆ ಆಮಿಷ ಒಡ್ಡಿ ಮತ ಕೇಳುವಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾ ಆಯೋಗ ಕೂಡಲೇ ಅಸಿಂಧುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

WhatsApp Group Join Now
Telegram Group Join Now
Share This Article