ಪರಿಷತ್ ಚುನಾವಣೆ: ಮತದಾರರ ಪಟ್ಟಿಯಲ್ಲಿ ನಕಲಿ ಹೆಸರು; ಬಿಜೆಪಿ ದೂರು

Ravi Talawar
ಪರಿಷತ್ ಚುನಾವಣೆ: ಮತದಾರರ ಪಟ್ಟಿಯಲ್ಲಿ  ನಕಲಿ ಹೆಸರು; ಬಿಜೆಪಿ ದೂರು
WhatsApp Group Join Now
Telegram Group Join Now

ಕೋಲಾರ, ಜೂ.2: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ನಕಲಿ ದಾಖಲೆಗಳನ್ನು ಕೊಟ್ಟು ಸೇರ್ಪಡೆಯಾಗಿರುವ ಮತದಾರರು ಮತ್ತು ಈ ರೀತಿ ನಕಲಿ ಮತದಾರರನ್ನು ಸೇರ್ಪಡೆ ಮಾಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾಗೂ ಈ ನಕಲಿ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತೆ ಚುನಾವಣಾ ಆಯೋಗಕ್ಕೆ ದೂರ ನೀಡಿದ ಬಿಜೆಪಿ ನಿಯೋಗ ದೂರು ನೀಡಿದೆ.

ಇದೇ ಜೂನ್​ 3 ರಂದು ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವು ತನ್ನ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಹಾಗೂ ಇತರೆ ಅಧಿಕಾರಿಗಳು ಬೇರೆ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶದಿಂದ ಅರ್ಜಿಗಳನ್ನು ಪರಿಶೀಲಿಸುವಾಗ ನಿರ್ಲಕ್ಷ್ಯತನದಿಂದ ಪದವೀಧರರಲ್ಲದ ಮತ್ತು ಅನರ್ಹರನ್ನು ಕಾನೂನುಬಾಹಿರವಾಗಿ ಮತದಾರರ ಪಟ್ಟಿಗೆ ಸೇರಿಸಿದ್ದಾರೆ ಎಂದು ಆರೋಪಿಸಿದೆ.

ಜೊತೆಗ ಈ ಕುರಿತು ಬಿಜೆಪಿ ನಿಯೋಗ, ‘ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರಿಕೊಂಡಿರುವವರನ್ನು ವಿಚಾರಿಸಿದಾಗ ಕಾಂಗ್ರೆಸ್ ಪಕ್ಷವು ತಮ್ಮ ಅಧಿಕಾರಿಗಳನ್ನು ಬಳಸಿಕೊಂಡು ಸುಳ್ಳು ಅರ್ಜಿ ಸಲ್ಲಿಸಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿರುವುದು ಧೃಡಪಟ್ಟಿದೆ. ಇವರ್ಯಾರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅಗತ್ಯವಿರುವ ಶಾಲಾ ಶಿಕ್ಷಣವನ್ನೂ ಪೂರ್ಣಗೊಳಿಸಿಲ್ಲವಾದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಿ ಸೇರ್ಪಡೆಗೊಳಿಸಿದ್ದಾರೆ.

ಆದ್ದರಿಂದ ಈ ಕೂಡಲೇ ನಕಲಿ ಮತದಾರರು ಮತ್ತು ಇದಕ್ಕೆ ಕಾರಣೀಬೂತರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳುವಂತೆ ಹಾಗೂ ಇದೇ ರೀತಿಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ನಕಲಿ ಮತದಾರರನ್ನು ಆಕ್ರಮವಾಗಿ ಮತದಾರರ ಪಟ್ಟಿಗೆ ಇತರೆ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶದಿಂದ ಸೇರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ನಾರಾಯಣಸ್ವಾಮಿ ಚಲವಾದಿ ಹಾಗೂ ಮುಖರು ಉಪಸ್ಥಿತರಿದ್ದರು

WhatsApp Group Join Now
Telegram Group Join Now
Share This Article