ಜಮ್ಮು ಕಾಶ್ಮೀರ: ಮುಂದಿನ ತಿಂಗಳು ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.14 ಮುಸ್ಲಿಂ ಹೆಸರುಗಳೂ ಪಟ್ಟಿಯಲ್ಲಿ ಸೇರಿವೆ. ಇದಕ್ಕೂ ಮುನ್ನ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿತ್ತು.
ಪಕ್ಷವು ತನ್ನ ಹಲವು ಹಳೆಯ ನಾಯಕರ ಟಿಕೆಟ್‌ಗಳನ್ನು ರದ್ದುಗೊಳಿಸಿದೆ. ಬೇರೆ ಪಕ್ಷಗಳ ಯುವ ನಾಯಕರಿಗೂ ಬಿಜೆಪಿ ಅವಕಾಶ ನೀಡಿದೆ. ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ಆಗಸ್ಟ್ 27 ಕೊನೆಯ ದಿನವಾಗಿರುವುದರಿಂದ ಸೋಮವಾರವೇ ಪಟ್ಟಿ ಬಿಡುಗಡೆ ಮಾಡುವುದು ಬಿಜೆಪಿಗೆ ಅನಿವಾರ್ಯವಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿದ್ದು, ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.