ಸಿದ್ದರಾಮಯ್ಯ ವಿರುದ್ಧ ಬಿಜೆಪಿ  ಮುಖಂಡ ಎನ್.ಆರ್​. ರಮೇಶ್ ಲೋಕಾಯುಕ್ತಕ್ಕೆ ದೂರು

Ravi Talawar
ಸಿದ್ದರಾಮಯ್ಯ ವಿರುದ್ಧ ಬಿಜೆಪಿ  ಮುಖಂಡ ಎನ್.ಆರ್​. ರಮೇಶ್ ಲೋಕಾಯುಕ್ತಕ್ಕೆ ದೂರು
WhatsApp Group Join Now
Telegram Group Join Now

ಬೆಂಗಳೂರು, ಜುಲೈ 20: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ  ಮುಖಂಡ ಎನ್.ಆರ್​. ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು 400ಕ್ಕೂ ಹೆಚ್ಚು ಪುಟಗಳ ದಾಖಲೆಗಳ ಸಮೇತ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 1997-98ರಲ್ಲಿ ಜೆಹೆಚ್​ ಪಟೇಲ್​ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸ್ವಾಧೀನಪಡಿಸಿಕೊಂಡ ದೇವನೂರು ಮೂರನೇ ಬಡಾವಣೆಯನ್ನು ಮುಡಾ ಕೈ ಬಿಡುವಂತೆ ಅಧಿಸೂಚನೆ ಹೊರಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅಲ್ಲದೆ 2024-05ರಲ್ಲಿ ಧರ್ಮಸಿಂಗ್ ಅವರ ಸರ್ಕಾರದಲ್ಲೂ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಇದೇ ಭೂಮಿಯನ್ನು ಮೃತ ಲಿಂಗ ಎಂಬ ಹೆಸರಿನ ವ್ಯಕ್ತಿಯ ಹೆಸರಿನಲ್ಲಿ ಭೂ ಪರಿವರ್ತನೆ ಮಾಡಿಸಿದ್ದರು ಎಂದು ಆರೋಪಿಸಿದರು.

ಮೊದಲನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದ ವೇಳೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಮೈಸೂರಿನ ವಿಜಯನಗರದ 2 ಮತ್ತು 3 ಬಡಾವಣೆಯಲ್ಲಿ ಸುಮಾರು 39 ಸಾವಿರ ಚದರ ಅಡಿ​ನ 14 ನಿವೇಶನಗಳನ್ನು ಬದಲಿ ನಿವೇಶನ ಹೆಸರಿನಲ್ಲಿ ತಮ್ಮ ಹೆಸರಿಗೆ ಮಾಡುವಂತೆ ಮುಡಾ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ನಂತರ 2022ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಮಯದಲ್ಲಿ ಈ 14 ನಿವೇಶನಗಳನ್ನು ತಮ್ಮ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ನೋಂದಣಿ ಮಾಡಿಸಿದ್ದಾರೆ. ದೇವನೂರು ಬಡವಾಣೆಯಲ್ಲಿ ಒಂದು ನಿವೇಶನ ಬೆಲೆ 5-6 ಕೋಟಿ ಇದ್ದರೆ, ವಿಜಯನಗರದಲ್ಲಿನ 14 ಬಡವಾಣೆಯಗಳ ಬೆಲೆ ಸುಮಾರು 50-60 ಕೋಟಿ ರೂ. ಇದೆ. ಒಟ್ಟಿನಲ್ಲಿ ಪ್ರಭಾವಿ ಹುದ್ದೆಯಲ್ಲಿರುವಾಗಲೇ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಹಗರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರ ಹಾಗೂ ಆ ಸಮಯದಲ್ಲಿ ಮೂಡಾದಲ್ಲಿದ್ದ ಅಧಿಕಾರಿಗಳ ವಿರುದ್ಧ ದೂರು ಕೊಟ್ಟಿದ್ದೇನೆ ಎಂದರು.

 

WhatsApp Group Join Now
Telegram Group Join Now
Share This Article