ಮುಡಾ ಹಗರಣ; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ!

Ravi Talawar
ಮುಡಾ ಹಗರಣ; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ!
WhatsApp Group Join Now
Telegram Group Join Now

ಬೆಂಗಳೂರು, ಜುಲೈ 24: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ಭಾರೀ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅದರಲ್ಲೂ ಈ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದರಿಂದ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರುವರೆಗೆ ವಿಪಕ್ಷ ಬಿಜೆಪಿ  ಪಾದಯಾತ್ರೆ ನಡೆಸಲು ಚಿಂತನೆ ನಡೆಸಿದೆ. ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಬಗ್ಗೆ ಬಿಜೆಪಿ ಅಧಿವೇಶನದಲ್ಲಿ ನಿಲುವಳಿ ಮುಂಡಲಿಸಲು ಸಿದ್ಧತೆ ನಡೆಸಿದೆ. ನಂತರ ಸನ್ನಿವೇಶ ಆಧರಿಸಿ ಮುಖ್ಯಮಂತ್ರಿಗಳ ರಾಜಿನಾಮೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಬಿಜೆಪಿ ತೀರ್ಮಾನ ಕೈಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂಪಾಯಿ. ಬೆಲೆಬಾಳುವ 14 ನಿವೇಶನ​ಗಳನ್ನು ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ ಗಂಭೀರ ಆರೋಪ ಮಾಡುತ್ತಿದೆ.

ಈ ಆರೋಪಕ್ಕೆ ಸಿದ್ದರಾಮಯ್ಯ, ನಿಯಮದ ಪ್ರಕಾರವೇ ಎಲ್ಲರಿಗೂ ಹಂಚಿಕೆಯಾಗುವಂತೆ ಮುಡಾದಿಂದ ಸೈಟ್‌ ಹಂಚಿಕೆಯಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಾವು ಅಲ್ಲೇ ಸೈಟ್‌ ನೀಡಬೇಕೆಂದು ಕೇಳಿಕೊಂಡಿಲ್ಲ. ಮುಡಾದವರು ಹಂಚಿಕೆ ಮಾಡಿದ್ದಾರೆ. ಯಾವುದೇ ಅಕ್ರಮ ನಡೆಸಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

 

WhatsApp Group Join Now
Telegram Group Join Now
Share This Article