ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆ ಯ ಫಲಿತಾಂಶದ ಆಘಾತದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜುಲೈ 18) ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪಲಿದ್ದು, ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.