ಬಳ್ಳಾರಿ:ಸೆ.14: ‘ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಎಸ್.ಸಿ ಮೋರ್ಚಾದ ಕಾರ್ಯಕರ್ತರು ಇಲ್ಲಿನ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಎಸ್ಸಿ ಮೋರ್ಚಾದ ಅಧ್ಯಕ್ಷ ರಾಜೇಶ್, ‘ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿದ್ದಾರೆ. ಇದು ಸಂವಿಧಾನಕ್ಕೆ ತೋ ರಿದ ಅಗೌರವ’ ಎಂದು ಅವರು ಹರಿಹಾಯ್ದರು. ‘ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಲು ಏನೆಂದು ಹೇಳಬೇಕು’ ಎಂದು ಪ್ರಶ್ನಿಸಿದರು. ಹೊರಟಿದೆ’
“ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಇದೇ ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನ್ಯಾಯ ಮಾಡಿದೆ’ ಎಂದು ಅವರು ಆರೋಪಿಸಿದರು. ಬಂಡಿಮೋಟ್ ವಿ.ಗಾದಿಲಿಂಗ ಮಾತನಾಡಿ, ‘ರಾಹುಲ್ ಗಾಂಧಿ ಸಂಸತ್ತಿನಲ್ಲಿ ಚರ್ಚೆ ಮಾಡದೇ, ವಿದೇಶದಲ್ಲಿ ದೇಶದ ಆಂತರಿಕ ವಿಷಯಗಳನ್ನು ಚರ್ಚೆ ನಡೆಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು. ‘ಚೀನಾ ಕುರಿತು ಹೊಗಳಿರುವಂತಹ ರಾಹುಲ್ ಗಾಂಧಿ ಅವರು ಕೂಡಲೇ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.