ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Ravi Talawar
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
WhatsApp Group Join Now
Telegram Group Join Now
ಬಳ್ಳಾರಿ, ಮೇ.29: ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ‌ ಇಂದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ವಿರುದ್ಧ ಟೈರ್ ಗೆ ಬೆಂಕಿ‌ ಹಚ್ಚಿ, ಪ್ರತಿಕೃತಿ ದಹನ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರದ ಪ್ರತಿಕೃತಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಮತ್ತು ನಾಗೇಂದ್ರ ಪೋಟೋ ಧಹಿಸಿ, ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಬಾಯಿ ಬಡಿದು ಕೊಂಡ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ಮಾಡಿ. ರಾಜ್ಯದಲ್ಲಿನ ಭ್ರಷ್ಟಾಚಾರ ಅಡಳಿತವನ್ನು ಕೊನೆಗೊಳಿಸಬೇಕು ಎಂದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಗೋಲ್ ಮಾಲ್. ನಿಗಮದಲ್ಲಿನ 187 ಕೋಟಿಯಲ್ಲಿನ 94 ಕೋಟಿ ಲೂಟಿ ಹೊಡೆದ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ಭಾಗಿಯಾಗಿದ್ದಾರೆಂದು ಆರೋಪಿಸಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಭ್ರಷ್ಟಾಚಾರದ ವಹಿವಾಟಿನ‌ ಲೆಕ್ಕ ನೀಡಲಾಗದೇ ನಿಗಮದ ಲೆಕ್ಕಾಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು.
ನಾಗೇಂದ್ರ ಅವರು ನನಗೂ ಅದಕ್ಕೂ ಸಂಬಂಧ ಇಲ್ಲ ಎನ್ನುವುದಾದರೆ ಈ   ಭ್ರಷ್ಟಾಚಾರದಲ್ಲಿ ಲೂಟಿ ಹೊಡೆದವರಾರು ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಪ್ರಶ್ನಿಸಿದರು.
ಪರಿಷತ್ ಸದಸ್ಯ ರವಿ ಕುಮಾರ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ‌ಮುಖಂಡರಾದ ಡಾ.ಮಹಿಪಾಲ್, ಕೆ.ಎ.ರಾಮಲಿಂಗಪ್ಪ, ಗುರುಲಿಂಗನಗೌಡ, ವೀರಶೇಖರ ರೆಡ್ಡಿ, ಶ್ರೀನಿವಾಸ ಮೋತ್ಕರ್, ಇಬ್ರಾಹಿಂ ಬಾಬು,  ಗುತ್ತಿಗನೂರು ವಿರೂಪಾಕ್ಷಗೌಡ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಗರದ  ದುರ್ಗಮ್ಮ ದೇಗುಲದಿಂದ ಆರಂಭಗೊಂಡು ಗಡಗಿ ಚೆನ್ನಪ್ಪ  ವೃತ್ತದ ವರೆಗೂ  ಪ್ರತಿಭಟನಾ ಮೆರವಣಿಗೆ ಆಗಮಿಸಿ ನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ದೂರು ನೀಡಲಾಯ್ತು.
WhatsApp Group Join Now
Telegram Group Join Now
Share This Article