ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Ravi Talawar
ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ  ಪ್ರತಿಭಟನೆ
WhatsApp Group Join Now
Telegram Group Join Now

ಕಲಬುರಗಿ, ಜನವರಿ 4: ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಬರೆದ ಡೆತ್​ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆ ಎಂಬುದು ಬಿಜೆಪಿ ಆರೋಪ ಆಗಿದೆ. ಹೀಗಾಗಿ ಸಾವಿಗೆ ಸಚಿವರೇ ಕಾರಣ ಎಂದು ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾದರು.

ಎರಡು ದಿನ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಒಳ್ಳೆ ರೀತಿಯಲ್ಲಿ ಆತಿಥ್ಯ ಕೊಡುತ್ತೇನೆ ಎಂದಿದ್ದರು. ಇದೀಗ ಅದರಂತೆಯೇ ಮುತ್ತಿಗೆ ಹಾಕಲು ಬಂದ ಬಿಜೆಪಿ ನಾಯಕರಿಗೆ ಎಳನೀರು, ಕಾಫಿ, ಟೀ ವ್ಯವಸ್ಥೆ ಮಾಡಲಾಗಿದ್ದು ಗಮನ ಸೆಳೆಯಿತು.

ಪ್ರತಿಭಟನೆಯಲ್ಲಿ ಭಾಗಿ ಆಗುವಂತೆ ಸಂತ್ರಸ್ತರ ಕುಟುಂಬಸ್ಥರಿಗೆ ಬಿಜೆಪಿ ಒತ್ತಡ ಹಾಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ತಮ್ಮ ವಿರುದ್ಧವಾಗಿ ಹೇಳಿಕೆ ಕೊಡುವಂತೆಯೂ ಬಿಜೆಪಿಯವರು ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

WhatsApp Group Join Now
Telegram Group Join Now
Share This Article