ಬೆಳಗಾವಿ.ನಗರದ ಧರ್ಮನಾಥ್ ಭವನದ ಹತ್ತಿರ ಇರುವ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಮಹರ್ಷಿ ಭಗೀರಥ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ, ಮುಖಂಡರಾದ ಚೇತನ ಅಂಗಡಿ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಕಾರ್ಯಾಲಯ ಕಾರ್ಯದರ್ಶಿ ವಿಠ್ಠಲ ಸಾಯಣ್ಣವರ, ವೀರಭದ್ರ ಪೂಜಾರಿ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.