ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣಕ್ಕೆ ಸಂಬ೦ದಿಸಿದ೦ತೆ ರಾಜ್ಯಪಾಲರ ಅನುಮತಿ ನೀಡಿದ್ದು ಖಂಡನಿಯ. ವಿನಃ ಕಾರಣ ಸಂಕಷ್ಟಕ್ಕೆ ಸಿಲುಕಿಸು ಹುನ್ನಾರ ಅಡಗಿದ್ದು ಆದ್ದರಿಂದ ಅ.೧೯ರಂದು ಬೆಳಿಗ್ಗೆ ೧೧ ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕತರಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು ಪ್ರತಿಭಟನೆಯು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭಗೊಳ್ಳುತ್ತದೆ. ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲರ ಅವರ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಇಂಡಿ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಪುರಸಭೆ ಸದಸ್ಯರು, ಮಾಜಿ ಜಿ.ಪಂ, ತಾ.ಪಂ ಸದಸ್ಯರು, ಗ್ರಾ.ಪಂ ಸದಸ್ಯರು, ವಿವಿಧ ಅಂಗ ಘಟಕಗಳ ಪದಾಧಿಕಾರಿಗಳು, ಹಿರಿಯ ಮುಖಂಡರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೋಮಿನ್ ಮನವಿ ಮಾಡಿದ್ದಾರೆ.