ಬೆಳಗಾವಿ.ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರ 75 ನೇ ಜನ್ಮದಿನದ ನಿಮಿತ್ಯವಾಗಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಬೆಳಗಾವಿ ನಾಳೆ 17/09/2025 ಬುಧವಾರ ಬೆಳಗ್ಗೆ 10 ಗಂಟೆಗೆ ಬೆಳಗಾವಿ ನಗರದ ಧರ್ಮನಾಥ ಸರ್ಕಲ್ ಹತ್ತಿರ ಇರುವ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ಆದಕಾರಣ ಪಕ್ಷದ ಕಾರ್ಯಕರ್ತರು, ಮೋದಿಜಿಯವರ ಅಭಿಮಾನಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿ ತುರ್ತು ಅವಶ್ಯಕತೆ ಇರುವ ರೋಗಿಗಳ ಜೀವ ಉಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಜಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.