Ad imageAd image

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆಘಾತ ಮಧ್ಯೆಯೇ ಫೈವ್ ಸ್ಟಾರ್ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ

Ravi Talawar
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆಘಾತ ಮಧ್ಯೆಯೇ ಫೈವ್ ಸ್ಟಾರ್ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ
WhatsApp Group Join Now
Telegram Group Join Now

ಬೆಂಗಳೂರು, ಮೇ 23: ಬೆಂಗಳೂರಿನ  ಮೂರು ಫೈವ್ ಸ್ಟಾರ್ ಹೋಟೆಲ್​ಗಳಿಗೆ  ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಸಂದೇಶ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ  ಬಳಿಯ ಸ್ಟಾರ್​ ಹೋಟೆಲ್​ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೋಟೆಲ್​ಗೆ ಪೊಲೀಸರು ಭೇಟಿ ನೀಡಿದ್ದಾರೆ. ಬಾಂಬ್ ಸ್ಕ್ವಾಡ್ ಸಹ ಸ್ಥಳಕ್ಕೆ ತೆರಳಿ ಪ ರಿಶೀಲನೆ ನಡೆಸುತ್ತಿದೆ. ಕೆಲವೇ ದಿನಗಳ ಹಿಂದೆ, ಅಂದರೆ ಮೇ 13ರಂದು ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದರ ಮರುದಿನವೇ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರದ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪರಿಶೀಲನೆಯ ನಂತರ ಈ ಎರಡೂ ಬೆದರಿಕೆ ಸಂದೇಶಗಳು ಹುಸಿ ಎಂಬುದು ತಿಳಿದುಬಂದಿತ್ತು.

ಕಳೆದ ತಿಂಗಳು ಜಾಲಹಳ್ಳಿ ಠಾಣೆ ವ್ಯಾಪ್ತಿಯ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದ್ದು ಆತಂಕಕ್ಕೆ ಕಾರಣವಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿತ್ತು.

ದೇಶದಾದ್ಯಂತ ಹುಸಿ ಬಾಂಬ್ ದಾಳಿ ಬೆದರಿಕೆ ಸಂದೇಶಗಳು ಕಳೆದ ಕೆಲವು ತಿಂಗಳುಗಳಲ್ಲಿ ವಿಪರೀತ ಹೆಚ್ಚಾಗಿದೆ. ಇದು ಪೊಲೀಸರನ್ನು ಹಾಗೂ ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿವೆ. ಮೇ 19ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ದಾದರ್​ನ ಮೆಕ್​ಡೊನಾಲ್ಡ್​ಸ್ಫೋಟಿಸುವ ಕುರಿತು ಯಾರೋ ಮಾತನಾಡಿಕೊಳ್ಳುತ್ತಿದ್ದರು ಎನ್ನುವ ಮಾಹಿತಿ ನೀಡಿದ್ದು, ಆತಂಕಕ್ಕೆ ಕಾರಣವಾಗಿತ್ತು.

ದೆಹಲಿಯ 4 ಆಸ್ಪತ್ರೆಗಳಿಗೆ ಮೇ 14ರಂದು ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿತ್ತು. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಸಂದೇಶ ಬಂದಿದ್ದವು. ನಂತರ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು.

WhatsApp Group Join Now
Telegram Group Join Now
Share This Article