ದೆಹಲಿ,14: ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ಗಳು ಬಂದಿದೆ. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಬಂದಿದೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
ಭಾನುವಾರ ದೆಹಲಿಯ 10 ಆಸ್ಪತ್ರೆಗಳು ಮತ್ತು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಪೊಲೀಸರು ಬೆದರಿಕೆಯನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಮೇ 1 ರಂದು, ದೆಹಲಿ-ಎನ್‌ಸಿಆರ್‌ನ 150 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು.