ಬೆಂಗಳೂರು, ಆಗಸ್ಟ್ 29: ಬೆಂಗಳೂರಿನಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat) ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್ಡಿಎಕ್ಸ್ ಸ್ಫೋಟಿಸುವುದಾಗಿ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು ಆಧರಿಸಿ ಕೇಸ್ ದಾಖಲಿಸಿದ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಜುಲೈ 27ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿ ಮತ್ತು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.