ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Ravi Talawar
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
WhatsApp Group Join Now
Telegram Group Join Now

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ.

ಬೆಳಗ್ಗೆ 10 ಗಂಟೆಗೆ ಅಕ್ರಂ ವೈಕರ್ ಎಂಬ ಹೆಸರಿನ ಐಡಿಯಿಂದ ಇ-ಮೇಲ್ ಬಂದಿದೆ. ಡ್ರಗ್ ಕಿಂಗ್‌ಪಿನ್ ಜಾಫರ್ ಸಾದಿಕ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಕೃತಿಗಾ ಉದಯನಿಧಿ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ. ಬೆದರಿಕೆಯ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Share This Article