ಯತ್ನಾಳ್ ಬಣದ ಲಿಂಗಾಯತ ಅಸ್ತ್ರಕ್ಕೆ ಆರಂಭದಲ್ಲೇ ಹಿನ್ನಡೆ; ಗುಂಪಿನ ಸಭೆ ನಡೆಸಲ್ಲ ಎಂದ ಬೊಮ್ಮಾಯಿ

Ravi Talawar
ಯತ್ನಾಳ್ ಬಣದ ಲಿಂಗಾಯತ ಅಸ್ತ್ರಕ್ಕೆ ಆರಂಭದಲ್ಲೇ ಹಿನ್ನಡೆ; ಗುಂಪಿನ ಸಭೆ ನಡೆಸಲ್ಲ ಎಂದ ಬೊಮ್ಮಾಯಿ
WhatsApp Group Join Now
Telegram Group Join Now

ಬೆಂಗಳೂರು, ಫೆಬ್ರವರಿ 6: ಎರಡು ದಿನ ದೆಹಲಿಗೆ ಶಿಫ್ಟ್ ಆಗಿದ್ದ ಕರ್ನಾಟಕ ಬಿಜೆಪಿ ಬಂಡಾಯ ಮತ್ತೆ ಬೆಂಗಳೂರಿಗೆ ಬದಿದೆ. ಬಿವೈ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷ ಪಟ್ಟದಿಂದ ಕಿತ್ತೆಸೆಯಲೇಬೇಕು ಎಂದು ಯತ್ನಾಳ್ ಬಣ ಪಟ್ಟು ಹಿಡಿದು ಕುಳಿತಿದೆ. ಇತ್ತ ವಿಜಯೇಂದ್ರ ಬಣ ಯತ್ನಾಳ್​ರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಒತ್ತಾಯಿಸುತ್ತಿದೆ. ಇದಕ್ಕೆ ಕೌಂಟರ್ ಮಾಡಿರೋ ಯತ್ನಾಳ್ ಬಣ, ವಿಜಯೇಂದ್ರ ವಿರುದ್ಧ ಲಿಂಗಾಯತ ಅಸ್ತ್ರ ಹೂಡಿದೆ.

ಒಂದು ಗುಂಪಿನ ಸಭೆ ನಡೆಸಲ್ಲ ಎಂದ ಬೊಮ್ಮಾಯಿ

ವಿಜಯೇಂದ್ರ ವಿರುದ್ಧದ ಹೋರಾಟಕ್ಕೆ ನೇತೃತ್ವ ವಹಿಸುವಂತೆ ಯತ್ನಾಳ್ ಬಣ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಆದರೆ ಈ ಮನವಿಯನ್ನು ನಯವಾಗಿಯೇ ತಿರಸ್ಕರಿಸಿರುವ ಬಸವರಾಜ ಬೊಮ್ಮಾಯಿ, ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article