ಬಳ್ಳಾರಿ,ಸೆ.03: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸೆ.07 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಹೊಂಗಿರಣದ ಸಾಂಸ್ಕೃತಿಕ ಸಮುಚ್ಚಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ಜಿಲ್ಲಾ ಆರ್ಯ ಈಡಿಗ ಗೌನ ಮಹಾಜನ ಸಂಘದ ಜಿಲ್ಲಾಧ್ಯಕ್ಷ ಹೆಚ್.ಆರ್.ಶ್ರೀನಾಥ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಆಕಾಶವಾಣಿ ಎಫ್.ಎಂ ಕೇಂದ್ರದ ಉದ್ಘೋಷಕ ಬಸವರಾಜ ಅಮಾತಿ ಅವರು ಜಯಂತಿ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ರೇಣುಕಾ.ಎ ತಂಡದಿAದ ಭಕ್ತಿ ಸಂಗೀತ ಇರಲಿದೆ.
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 09.30 ಗಂಟೆಗೆ ನಗರದ ಈಡಿಗ ಹಾಸ್ಟೆಲ್ ನಿಂದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಗಡಿಗಿ ಚನ್ನಪ್ಪ ವೃತ್ತ- ಡಾ.ರಾಜಕುಮಾರ್ ರಸ್ತೆ- ಇಂದಿರಾ ವೃತ್ತದ ಮೂಲಕ ಸಾಂಸ್ಕೃತಿಕ ಸಮುಚ್ಚಯ ಹೊಂಗಿರಣ ಸಭಾಂಗಣದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್.ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.