ಕೊಪ್ಪಳ: ಕೊಪ್ಪಳ ಪಟ್ಟಣದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸ್ಥಾಪಿಸುತ್ತಿರುವ ಉಕ್ಕು ಮತ್ತು ವಿದ್ಯುತ್ ಸ್ಥಾವರದ ಕಾಮಗಾರಿಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪರಿಸರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೊಪ್ಪದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ತಿಳಿಸಿ ಉಕ್ಕು ಸ್ಥಾವರದ ಕೆಲಸವನ್ನು ನಿಲ್ಲಿಸುವಂತೆ ಮನವಿ ಮಾಡಿದರು.
ಕಳೆದ ತಿಂಗಳಷ್ಟೇ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ 54,000 ಕೋಟಿ ರೂ. ವೆಚ್ಚದಲ್ಲಿ ಸ್ಥಾವರವನ್ನು ಸ್ಥಾಪಿಸಲು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿತ್ತು. ಸ್ಥಾವರವು ಸ್ಥಾಪನೆಯಾದರೆ, ಮಾಲಿನ್ಯ ಮತ್ತಷ್ಟು ಹೆಚ್ಚಾಗುತ್ತದೆ ಎಂದು ನಿವಾಸಿಗಳು ದೂರಿದ್ದಾರೆ, ಈಗಾಗಲೇ ಪಟ್ಟಣವು ಈಗಾಗಲೇ ಅನೇಕ ಕೈಗಾರಿಕೆಗಳಿಂದಾಗಿ ಆರೋಗ್ಯದ ಅಪಾಯವನ್ನು ಎದುರಿಸುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮತ್ತು ಇತರರು ಸ್ಥಾವರದ ಅಪಾಯಗಳ ಬಗ್ಗೆ ಮುಖ್ಯಮಂತ್ರಿಗೆ ವಿವರಿಸಿದರು, ಸಿದ್ಧರಾಮಯ್ಯ ತಕ್ಷಣವೇ ಕೊಪ್ಪಳ ಜಿಲ್ಲಾಧಿಕಾರಿಗೆ ಎಲ್ಲಾ ಪೂರ್ವಸಿದ್ಧತಾ ಕಾರ್ಯಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.