ಕಲಬುರಗಿ, (ಅಕ್ಟೋಬರ್ 30): ಇದೇ ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ಸಂಬಂಧ ಕೋರ್ಟ್, ವಿಚಾರಣೆಯನ್ನು ಮುಂದೂಡಿದೆ. ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ. ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಹೀಗಾಗಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್ಎಸ್ಎಸ್ಗೆ ಹಿನ್ನಡೆಯಾದಂತಾಗಿದೆ
ನ.2ರ ಪಥಸಂಚಲನಕ್ಕೆ ಬ್ರೇಕ್: ಹೈಕೋರ್ಟ್ನಲ್ಲಿ ಆರ್ಎಸ್ಎಸ್ಗೆ ಹಿನ್ನೆಡೆ


