ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

Ravi Talawar
ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಐಪಿಎಲ್  ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಆರ್​ಸಿಬಿ, ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೂಡ ಸಚಿವ ಸಂಪುಟ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
Share This Article