ಮುಡಾ ಪ್ರಾಸಿಕ್ಯೂಷನ್ ನೊಟೀಸ್ ವಾಪಸಿಗೆ ಸಚಿವ ಸಂಪುಟ ನಿರ್ಣಯ

Ravi Talawar
ಮುಡಾ ಪ್ರಾಸಿಕ್ಯೂಷನ್ ನೊಟೀಸ್ ವಾಪಸಿಗೆ ಸಚಿವ ಸಂಪುಟ ನಿರ್ಣಯ
WhatsApp Group Join Now
Telegram Group Join Now

ಬೆಂಗಳೂರು (ಆಗಸ್ಟ್, 01): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದದಲ್ಲಿ ಇಂದು(ಆಗಸ್ಟ್ 01) ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಹಾಗೇ ಇನ್ನೊಂದು ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರು ನೊಟೀಸ್ ಜಾರಿ ಮಾಡಿದ್ದರು.

ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಿದ್ದ ಹಿನ್ನೆಲೆಯಲ್ಲಿ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಿದ್ದು,  ಈ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಕಾನೂನು ಸಂಘರ್ಷ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಮುಡಾ ಹಗರಣದ ಆರೋಪ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮ್ಯಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಚಿಂತನೆ ನಡೆಸಿದ್ದಾರೆ. ಇದಕ್ಕೂ ಮೊದಲು ನೋಟಿಸ್​ ನೀಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯಪಾಲರ ನೋಟಿಸ್​ಗೆ ಸಚಿವ ಸಂಪುಟ ವಿರೋಧಿಸಿದ್ದು, ನೋಟಿಸ್​​​ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪಿಸಿದೆ. ಅಲ್ಲದೇ ನೋಟಿಸ್​ ಹಿಂಪಡೆಯುವಂತೆ ನಿರ್ಣಯ ಕೈಗೊಂಡಿದೆ. ಇನ್ನು ಈ ಬಗ್ಗೆ ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
Share This Article