ಬೆಂಗಳೂರು, ಜೂನ್ 12: ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಜಾತಿ ಗಣತಿ ಮರು ಸಮೀಕ್ಷೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ (ಜೂ.12) ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ಎಲ್ಲ ಸಚಿವರು ಒಪ್ಪಿಗೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಕುರಿತು ಚರ್ಚಿಸಿದ್ದೇವೆ. 2011ರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ ಬಗ್ಗೆ ಸರ್ವೆ ನಡೆಸಲಾಗಿತ್ತುನಡೆಸಿದ್ದೆವು. 54 ಮಾನದಂಡಗಳು ಇಟ್ಟುಕೊಂಡು ಮನೆ ಮನೆಗೆ ಹೋಗಿ ಸರ್ವೆ ಮಾಡಿರುವ ವರದಿ ಪಡೆದಿದ್ದೇವೆ. 2011ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆ 6.11 ಕೋಟಿ ಇದೆ ಎಂದು ಹೇಳಿದರು.
2015ರಲ್ಲಿ 6.35 ಕೋಟಿ ಜನಸಂಖ್ಯೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಸರ್ವೆ ಆಗಿದ್ದು 5.98 ಕೋಟಿ ಜನರದ್ದು. 2015ರ ಏಪ್ರಿಲ್ 11ರಂದು ಜಾತಿಗಣತಿ ಸರ್ವೆ ಆರಂಭಿಸಿದೆ. 2025ರ ನವೆಂಬರ್ 30ರಂದು ಸರ್ವೆ ಮುಕ್ತಾಯಗೊಂಡಿತ್ತು. 1.60 ಲಕ್ಷ ಸಿಬ್ಬಂದಿ ಜಾತಿಗಣತಿ ಸರ್ವೆಯಲ್ಲಿ ಭಾಗಿಯಾಗಿದ್ದರು ಎಂದರು.


