ಬೆಂಗಳೂರು, ಸೆಪ್ಟೆಂಬರ್ 18: ಪದೇ ಪದೇ KAS ಹಾಗೂ PSI ಪರೀಕ್ಷೆ ಮುಂದೂಡುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. KAS, PSI, FDA ಸೇರಿದ್ದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವರ್ಷಗಳಿಂದ ಅಭ್ಯರ್ಥಿಗಳು ತಯಾರಿ ನಡೆಸಿದ್ದು, ಈಗ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷಾ ದಿನಾಂಕದ ನೋಟಿಫಿಕೇಶನ್ ಹೊರಿಡಿಸಿ, ನಂತರ ಪರೀಕ್ಷೆಗಳನ್ನು ಮುಂದೂಡುತ್ತಿರುವುದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೆಪಿಎಸ್ಇ ಹಾಗೂ ಕೆಇಎ ಎಡವಟ್ಟು ವಿರುದ್ಧ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭ್ಯರ್ಥಿಗಳು ಮುಂದಾಗಿದ್ದಾರೆ.
ಮೊನೆ ನಡೆಯಬೇಕಿದ್ದ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಏಕಾಏಕಿ ಮುಂದೂಡಿದೆ. ಪ್ರತಿ ಬಾರಿಯೂ ಇತರ ಎಡವಟ್ಟು ಮಾಡುತ್ತಿರುವುದು ಅಭ್ಯರ್ಥಿಗಳಿಗೆ ಸಂಕಷ್ಟ ತಂದಿದೆ.