ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ ಯಶ್​ಪಾಲ್​ ಸುವರ್ಣ ವಿರುದ್ಧ ಪ್ರಕರಣ

Ravi Talawar
ಸಿದ್ದರಾಮಯ್ಯ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ ಯಶ್​ಪಾಲ್​ ಸುವರ್ಣ ವಿರುದ್ಧ ಪ್ರಕರಣ
WhatsApp Group Join Now
Telegram Group Join Now

ಉಡುಪಿ, ಸೆಪ್ಟೆಂಬರ್​​: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್​​ಪಾಲ್ ಸುವರ್ಣ  ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ ಎ5 ಆಗಿದ್ದಾರೆ.

ವಿದ್ಯಾರ್ಥಿಯರನ್ನು ಗೇಟ್ ಬಳಿ ಪ್ರಾಂಶುಪಾಲರು ತಡೆದಿದ್ದ ಫೋಟೋ ವೈರಲ್ ಆಗಿತ್ತು. ಹೀಗಾಗಿ ಪ್ರಶಸ್ತಿ ಹಿಂಪಡೆಯುವಂತೆ ಹಿಜಾಬ್ ಪರ ಹೋರಾಟಗಾರರು ಒತ್ತಡ ಹಾಕಿದ್ದು, ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಪ್ರಶಸ್ತಿ ತಡೆ ಹಿಡಿದಿತ್ತು.

ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು.

ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್​ಎಸ್​ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article