ಬೆಂಗಳೂರು, ಜನವರಿ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್ಆರ್ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್ಆರ್ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.