ತಮಿಳುನಾಡಿಗೆ ಮತ್ತೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ನಿರ್ದೇಶನ

Ravi Talawar
ತಮಿಳುನಾಡಿಗೆ ಮತ್ತೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ನಿರ್ದೇಶನ
WhatsApp Group Join Now
Telegram Group Join Now

ನವದೆಹಲಿ,21: ತಮಿಳು ನಾಡಿಗೆ ಮತ್ತೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಮಂಗಳವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ. ಇಂದು ಮಂಗಳವಾರ ನಡೆಸಿದ ಸಭೆಯಲ್ಲಿ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.

ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್‌ಎಸ್ ಅಣೆಕಟ್ಟು ಒಳ ಹರಿವು ಹೆಚ್ಚಾಗಿದೆ. ಕಳೆದೊಂದು ವಾರದಲ್ಲಿ 1 ಟಿಎಂಸಿಯಷ್ಟು ನೀರು ಕನ್ನಂಬಾಡಿ ಕಟ್ಟೆ ಸೇರಿದೆ. ಇದೀಗ ಮುಂಗಾರು ಪೂರ್ವದಲ್ಲಿ ಆದೇಶ ಹೊರಬಿದ್ದಿದೆ.

WhatsApp Group Join Now
Telegram Group Join Now
Share This Article