ನವದೆಹಲಿ, ಅಕ್ಟೋಬರ್ 21: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ತನಿಖಾ ಸಂಸ್ಥೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಹಿಂದೆ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಅಭಿಪ್ರಾಯ ಕೇಳಿತ್ತು. ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಅಭಿಪ್ರಾಯ ಕೇಳಿತ್ತು. ಹೀಗಾಗಿ ಸಿಬಿಐಯಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ.