ಬೆಳಗಾವಿ: ನಗರದ ಗೋಮಟೇಶ ವಿದ್ಯಾಪೀಠದಲ್ಲಿ ವಂದೇ ಮಾತರಂ ಗೀತೆಯ 150 ನೇ ವರ್ಷಾಚರಣೆ ನಿಮಿತ್ತ ಸಾವಿರಾರು ವಿದ್ಯಾರ್ಥಿಗಳಿಂದ ಸಾಮೂಹಿಕ ಗಾಯನ ದೊಂದಿಗೆ ಸಂಭ್ರಮಾಚರಣೆ ನೆರವೇರಿತು.
ನಗರದ ಗೋಮಟೇಶ ವಿದ್ಯಾಪೀಠದಲ್ಲಿ ವಂದೇ ಮಾತರಂ ಗೀತೆಯ 150 ನೇ ವರ್ಷಾಚರಣೆ ಅಂಗವಾಗಿ ವಂದೇ ಮಾತರಂ ಗೀತೆಯ ಸ್ಮರಣೆ ಹಾಗೂ ಸಾವಿರಾರು ವಿದ್ಯಾರ್ಥಿಗಳು ವಂದೇ ಮಾತರಂ ಗೀತೆಯನ್ನು ಸಾಮೂಹಿಕವಾಗಿ ಏಕಕಾಲಕ್ಕೆ ಹಾಡುವ ಮೂಲಕ ಸಂಭ್ರಮಿಸಿದರು .ಈ ಸಂದರ್ಭದಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯರಾದ ಜಗದೀಶ್ ಹಿರೇಮನಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ಗೋಮಟೇಶ ವಿದ್ಯಾಪೀಠದ ಶಿಕ್ಷಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು


