ಚಂಡೀಗಢ, ಮಾರ್ಚ್ 19: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ಸೇರಿದಂತೆ ಅವರ ವಿವಿಧ ಬೇಡಿಕೆಗಳನ್ನು ಚರ್ಚಿಸಲು ಪ್ರತಿಭಟನಾ ನಿರತ ರೈತರು ಮತ್ತು ಕೇಂದ್ರ ಸಚಿವರ ನಡುವೆ ಮಾತುಕತೆ ನಡೆಯಿತು. ಮಹಾತ್ಮ ಗಾಂಧಿ ಸಾರ್ವಜನಿಕ ಆಡಳಿತ ಸಂಸ್ಥೆಯಲ್ಲಿ ಬೆಳಗ್ಗೆ ಗಂಟೆಗೆ ಸಭೆ ನಡೆಯಿತು. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ 28 ಸದಸ್ಯರ ನಿಯೋಗ ಸಭೆಯಲ್ಲಿ ಭಾಗವಹಿಸಿತ್ತು. ಸಭೆಯಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು.