ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಐಸೋಲೇಷನ್​ ವಾರ್ಡ್​, ನೋಡಲ್​ ಆಸ್ಪತ್ರೆ ತೆರೆಯಲು ಕೇಂದ್ರ ಸೂಚನೆ

Ravi Talawar
ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಐಸೋಲೇಷನ್​ ವಾರ್ಡ್​, ನೋಡಲ್​ ಆಸ್ಪತ್ರೆ ತೆರೆಯಲು ಕೇಂದ್ರ ಸೂಚನೆ
WhatsApp Group Join Now
Telegram Group Join Now

ನವದೆಹಲಿ: ವಿಶ್ವದ ಹಲವು ರಾಷ್ಟ್ರಗಳಲ್ಲಿ ತಲ್ಲಣ ಮೂಡಿಸುತ್ತಿರುವ ಮಂಗನ ಕಾಯಿಲೆಗೆ ವಿಶ್ವ ಆರೋಗ್ಯ ಸಂಸ್ಥೆಯು  ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ. ಇದರ ಬೆನ್ನಲ್ಲೇ ಭಾರತ ಸರ್ಕಾರವೂ ಮುಂಜಾಗ್ರತೆ ಕ್ರಮ ವಹಿಸಲು ಮುಂದಾಗಿದೆ.

ಮೈಮೇಲೆ ದದ್ದು ಹೊಂದಿರುವ ರೋಗಿಗಳನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್‌ಗಳನ್ನು ಸಿದ್ಧಪಡಿಸುವಂತೆ ಆರೋಗ್ಯ ಸಚಿವಾಲಯವು ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಮಂಕಿ ಫಾಕ್ಸ್​ ರೋಗ ಕಂಡುಬಂದಲ್ಲಿ ಅಂಥವರಿಗೆ ಚಿಕಿತ್ಸೆ ನೀಡಲು ದೆಹಲಿಯಲ್ಲಿ ಮೂರು ನೋಡಲ್ ಆಸ್ಪತ್ರೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ವಿಮಾನ ನಿಲ್ದಾಣಗಳಲ್ಲಿ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಶಂಕಿತರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನೂ ನಡೆಸಬೇಕು ಎಂದು ಸಚಿವಾಲಯ ನಿರ್ದೇಶಿಸಿದೆ.

ಈ ವರ್ಷ ಆಫ್ರಿಕಾದಲ್ಲಿ 18 ಸಾವಿರಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ನೆರೆಯ ಪಾಕಿಸ್ತಾನದಲ್ಲೂ ಮಂಗನ ಕಾಯಿಲೆಯ ಪ್ರಕರಣಗಳು ಬೆಳಕಿಗೆ ಬಂದಿವೆ. ಮಂಕಿಪಾಕ್ಸ್ ಪ್ರಕರಣಗಳ ಸಾವಿನ ಪ್ರಮಾಣವು ಶೇಕಡಾ 1ರಿಂದ 10ರಷ್ಟು ಇದೆ.

 

WhatsApp Group Join Now
Telegram Group Join Now
Share This Article