Ad imageAd image

ಏಪ್ರಿಲ್‌ 18 ರಿಂದ ಸಿಇಟಿ ಪರೀಕ್ಷೆ: ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ

Ravi Talawar
ಏಪ್ರಿಲ್‌ 18 ರಿಂದ ಸಿಇಟಿ ಪರೀಕ್ಷೆ: ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ
WhatsApp Group Join Now
Telegram Group Join Now

ಬೆಂಗಳೂರು,ಏಪ್ರಿಲ್ 17: ವೃತ್ತಿಪರ ಕೋರ್ಸ್‍ಗಳಿಗೆ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ ಏಪ್ರಿಲ್‌ 18 ರಿಂದ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ. ಗುರುವಾರ (ಏಪ್ರಿಲ್‌ 18) ಬೆಳಿಗ್ಗೆ 10:30ರಿಂದ 11: 50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ.

ಏ.19ರಂದು ಬೆಳಿಗ್ಗೆ 10:30ರಿಂದ 11:50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.

WhatsApp Group Join Now
Telegram Group Join Now
Share This Article