ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ನೀಡಲಾಗುವ ಪ್ರಸಾದ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಅವರು ಹೇಳಿದರು.
ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅವುಗಳನ್ನು ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಕರೆದಿದೆ. ತಿರುಮಲ ದೇವಸ್ಥಾನದ ಪಾವಿತ್ರ್ಯತೆ ಮತ್ತು ಆಡಳಿತದ ಬಗ್ಗೆ ಈ ನಿಲುವು ಚರ್ಚೆಯನ್ನು ಹುಟ್ಟುಹಾಕಿದೆ. ಕಳೆದ 5 ವರ್ಷಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಸಿಎಂ ನಾಯ್ಡು ಹೇಳಿದ್ದಾರೆ.