ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ  ವಹಿಸಬೇಕು

Ravi Talawar
ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ  ವಹಿಸಬೇಕು
WhatsApp Group Join Now
Telegram Group Join Now

ಶಿವಮೊಗ್ಗ, ಮೇ 30: ವಾಲ್ಮೀಕಿ ಅಭಿವೃದ್ಧಿ ನಿಗಮದ  ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ  ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಆಗ್ರಹಿಸಿದ್ದಾರೆ. ಚಂದ್ರಶೇಖರನ್ ಮನೆಗೆ ಭೇಟಿ ನೀಡಿದ ನಂತರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಈ 2 ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 1 ವಾರ ಗಡುವು ನೀಡುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.\

ಲೋಕಸಭೆ ಚುನಾವಣೆ ಸಮಯದಲ್ಲಿ ಈ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರವನ್ನು ಎಟಿಎಂ ರೀತಿಯಲ್ಲಿ ಬಳಕೆ ಮಾಡಿಕೊಂಡಿದೆ. ನಾವು ಆರೋಪ ಮಾಡಿದಾಗ ದಾಖಲೆ ಎಲ್ಲಿ ಎನ್ನುತ್ತಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಬಳಿ ದಾಖಲೆಗಳನ್ನು ಕೇಳುತ್ತಿದ್ದರು. ಈಗ ಸರ್ಕಾರ ಈ ಹಗರಣಕ್ಕೆ ಉತ್ತರವನ್ನು ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಇದು ರಾಜ್ಯದ ದೊಡ್ಡ ಅವ್ಯವಹಾರ. ಇದರಲ್ಲಿ ಕಾಂಗ್ರೆಸ್ ನಾಯಕರ ಕೈವಾಡ ಇರುವುದು ಸ್ಪಷ್ಟವಾಗಿದೆ. ತಕ್ಷಣ ಸಚಿವ ನಾಗೇಂದ್ರ ರಾಜಿನಾಮೆ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹಿಸಿದರು.

WhatsApp Group Join Now
Telegram Group Join Now
Share This Article