ಸವದತ್ತಿ : 2023-24 ನೇ ಸಾಲಿನ ಜಿಲ್ಲಾ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸವದತ್ತಿ ಪಟ್ಟಣದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ನೀಲಪ್ಪ ಅಣ್ಣಿಗೇರಿ, ಮೈಲಾರ ಹೊಸಮನಿ, ಸಿದ್ದಪ್ಪ ಕಾಳಗಿ, ಪವನ ಹೊಸಮನಿ, ಗಿರೀಶ್ ಅಣ್ಣಿಗೇರಿ ಮುಂತಾದವರು ಉಪಸ್ಥಿತರಿದ್ದರು.