ನಿರ್ಮಾಣ ಹಂತದ 1.30 ಲಕ್ಷ ಮನೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Ravi Talawar
ನಿರ್ಮಾಣ ಹಂತದ 1.30 ಲಕ್ಷ ಮನೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು: ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ 47,800 ಮನೆಗಳು ಸೇರಿ ಒಟ್ಟು 1.30 ಲಕ್ಷ ಮನೆ ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಿದರು.

 ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯ ಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಗೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಅಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿದ್ದು ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದ್ದರಿಂದ, ಫಲಾನುಭವಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಿ, ಒಂದು ಲಕ್ಷಕ್ಕೆ ನಿಗದಿಗೊಳಿಸಿ, ಪ್ರತಿ ಫಲಾನುಭವಿಗೆ ಬಾಕಿ 4 ಲಕ್ಷಗಳಂತೆ ಸರ್ಕಾರದಿಂದಲೇ ಭರಿಸಲು ಅನುಮೋದನೆ ನೀಡಲಾಗಿದೆ. ಇದಕ್ಕೆ ಪ್ರಥಮ ಹಂತದಲ್ಲಿ 500 ಕೋಟಿ ಮಂಜೂರು ಮಾಡಲಾಗಿದೆ. ಹೆಚ್ಚುವರಿ ಅನುದಾನದ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದರು.

WhatsApp Group Join Now
Telegram Group Join Now
Share This Article