ಗೆಜೆಟೆಡ್​ ಪ್ರೊಬೇಷನರ್ಸ್​​ ಪರೀಕ್ಷೆ ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್​ಸಿಗೆ ಆದೇಶ

Ravi Talawar
ಗೆಜೆಟೆಡ್​ ಪ್ರೊಬೇಷನರ್ಸ್​​ ಪರೀಕ್ಷೆ ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್​ಸಿಗೆ ಆದೇಶ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್​ 02: ಎರಡು ತಿಂಗಳ ಒಳಗಾಗಿ ಗೆಜೆಟೆಡ್​ ಪ್ರೊಬೇಷನರ್ಸ್​​​ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಕರ್ನಾಟಕ ಲೋಕಸೇವಾ ಆಯೋಗ ​ಕ್ಕೆ ಸೂಚನೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿದ ಸಿಎಂ ಸಿದ್ದರಾಮಯ್ಯ, “ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.” ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article