KAS ಅಧಿಕಾರಿಗಳ ಜೇಷ್ಠತಾ ಪಟ್ಟಿ 10 ದಿನಗಳ ಒಳಗಾಗಿ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Ravi Talawar
KAS ಅಧಿಕಾರಿಗಳ ಜೇಷ್ಠತಾ ಪಟ್ಟಿ 10 ದಿನಗಳ ಒಳಗಾಗಿ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು: KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದ್ದು, ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ.‌ ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ ಎಂದು ಸಿಎಂ ಸೂಚಿಸಿದರು.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಮಾಡಿರುವ ಭಾಷಣವನ್ನು ನೀವೆಲ್ಲಾ ಓದಬೇಕು. ಐತಿಹಾಸಿಕ ಕಾರಣಗಳಿಂದಾಗಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಈ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು.

WhatsApp Group Join Now
Telegram Group Join Now
Share This Article