ಕಳಸಾ ಬಂಡೂರಿ ನಾಲಾ ಯೋಜನೆ; ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ

Ravi Talawar
ಕಳಸಾ ಬಂಡೂರಿ ನಾಲಾ ಯೋಜನೆ; ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 19: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 18ರಂದು ಪತ್ರ ಬರೆದಿರುವ ಸಿದ್ದರಾಮಯ್ಯ, ಪ್ರಧಾನಿಗೆ ಜನ್ಮದಿನದ (ಮೋದಿ ಜನ್ಮದಿನ ಸೆಪ್ಟೆಂಬರ್ 17ರಂದು) ಶುಭಾಶಯವನ್ನೂ ಕೋರಿದ್ದಾರೆ.

‘ಪ್ರಾರಂಭದಲ್ಲಿ ನಿಮ್ಮ ಜನ್ಮದಿನದಂದು ಶುಭಾಶಯಗಳನ್ನು ತಿಳಿಸುತ್ತೇನೆ. ನಾನು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ನಿಮ್ಮ ತುರ್ತು ಗಮನಕ್ಕೆ ತರಲು ನಾನು ಈ ಪತ್ರ ಬರೆಯುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?

ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ  ವನ್ಯಜೀವಿ ಅನುಮೋದನೆಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿದೆ. ಮಹದಾಯಿ ವಾಟರ್ ಡಿಸ್​ಪ್ಯೂಟ್ ಟ್ರಿಬ್ಯೂನಲ್ ಅವಾರ್ಡ್ ಅನ್ನು 14-08-2018 ರಂದು ಘೋಷಿಸಲಾಯಿತು ಮತ್ತು 27-02-2020 ರಂದು ಭಾರತದ ಗೆಜೆಟ್‌ನಲ್ಲಿ ಪ್ರಕಟಿಸಲಾಯಿತು. ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತಿರುಗಿಸಲು (ಕಳಸಾ ನಾಲಾದಿಂದ 1.72 ಟಿಎಂಸಿ ಮತ್ತು ಬಂಡೂರ ನಾಲಾದಿಂದ 2.18 ಟಿಎಂಸಿ) ರಾಜ್ಯ ಸರ್ಕಾರವು 16-06-2022 ರಂದು CWC ಗೆ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ (ಲಿಫ್ಟ್ ಯೋಜನೆಗಳು) ಮಾರ್ಪಡಿಸಿದ ಪೂರ್ವ-ಕಾರ್ಯಸಾಧ್ಯತಾ ವರದಿಯನ್ನು ಅನುಮೋದನೆಗಾಗಿ ಸಲ್ಲಿಸಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. ವರದಿ ಸಲ್ಲಿಕೆ ಕುರಿತ ಪೋರ್ಟಲ್ ಸಂಖ್ಯೆಯನ್ನೂ ಉಲ್ಲೇಖಿಸಿದ್ದಾರೆ.

WhatsApp Group Join Now
Telegram Group Join Now
Share This Article