ಬಾಲ್ಯ ವಿವಾಹ ಪದ್ಧತಿ ನಿಷೇಧವಾಗಬೇಕು – ಹುಲ್ಲೇಶ್ ಸಿಂದೋಗಿ

A B
By A B
ಬಾಲ್ಯ ವಿವಾಹ ಪದ್ಧತಿ ನಿಷೇಧವಾಗಬೇಕು – ಹುಲ್ಲೇಶ್ ಸಿಂದೋಗಿ
WhatsApp Group Join Now
Telegram Group Join Now
ಕೊಪ್ಪಳ: ಶಾಲಾ ಶಿಕ್ಷಣ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಸಂಸ್ಥೆಯವರು ಹಲವಾರು ಕಾರ್ಯಕ್ರಮಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸ ಮೂಡಿಸುತ್ತಿದ್ದಾರೆ. ಜೊತೆಗೆ ಬಾಲ್ಯ ವಿವಾಹ ಪದ್ಧತಿ ನಿಷೇಧವಾಗಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆ ಸೇರಿಸುವ ಯೋಜನೆ ಹಮ್ಮಿಕೊಂಡಿದ್ದು ನಿಜಕ್ಕೂ ಸ್ತುತ್ಯವೆಂದು ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಹುಲ್ಲೇಶ್ ಸಿಂದೋಗಿ ಹೇಳಿದರು.

ಜಿಲ್ಲೆಯ ಶಹಪುರ ಗ್ರಾಮದ ಕನಕ ಭವನದಲ್ಲಿ `ರಂಗ ಕಲಾ ಚೇತನ’ ತಂಡದಿAದ ಹಮ್ಮಿಕೊಂಡಿದ್ದ ಸಮುದಾಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರಂಗ ಕಲಾ ಚೇತನ ತಂಡದವರು ಈ ಉತ್ತಮ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು ಶ್ಲಾಘನೀಯ ಎಂದರು.

ಹುಲಿಗೆಮ್ಮ ಕಟ್ಟಿಮನಿ ಅವರು ಮಾತನಾಡಿ, ತಾಲೂಕಿನ ಆಯ್ದ ಶಾಲೆಗಳಲ್ಲಿ ಗ್ರಂಥಾಲಯ ಕೊಠಡಿ ನಿರ್ಮಿಸಿ, ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಜೊತೆಗೆ ಪ್ರೇರಕರನ್ನು ನೀಡಿ ಕಲಿಕಾಸಕ್ತಿ ಮೂಡಿಸಲು ಕಲಿಕಾ ಸಂಸ್ಥೆ ಶ್ರಮಿಸುತ್ತಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಅರಿವು ಮೂಡಿಸುತ್ತಾ ಉತ್ತಮ ಸಮಾಜ ನಿರ್ಮಿಸಲು ಮುಂದಾಗಿದ್ದಾರೆ ಎಂದರು.

ಕಲಿಕೆ ಟಾಟಾ ಟ್ರಸ್ಟ್ಸ್ ನ ಸಂಯೋಜಕ ಆಂಜನೇಯ ಮಾತನಾಡಿ, ಕಲಿಕಾ ಸಂಸ್ಥೆಯು ಸಮುದಾಯ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ತಮ್ಮ ಯೋಜನೆಗಳನ್ನು ಹಂಚಿಕೊAಡರು.

ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಿಕೆ ಟಾಟಾ ಟ್ರಸ್ಟ್ ಸಹಭಾಗಿತ್ವದಲ್ಲಿ “ರಂಗ ಕಲಾ ಚೇತನ ತಂಡದಿAದ” ಸಮುದಾಯ ಜಾಗೃತಿ ಕಾರ್ಯಕ್ರಮ ಜರುಗಿತು.
ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸುಧಾರಣಾ ಸಮಿತಿ ಉಪಾಧ್ಯಕ್ಷೆ ರೇವತಿ ಗೋನಾಳ್, ಸರ್ವ-ಸದಸ್ಯರು, ಶಾಲೆಯ ಸಿಬ್ಬಂದಿಯವರು, ಗ್ರಾಮ ಪಂಚಾಯತ್ ಸರ್ವಸದಸ್ಯರು, ಆಶಾ ಕಾರ್ಯಕರ್ತೆಯರು, ಮಹಿಳಾ ಸ್ವ-ಸಹಾಯ ಸಂಘದವರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಪ್ರೇರಕರು, ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೋಷಕರು, ಗುರುಹಿರಿಯರು ಭಾಗವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯ ದೇವರಾಜ್ ಅವರು ಹಲಗೆ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾ. ಪಂ ಸದಸ್ಯರು, ಗ್ರಾಮದ ಗಣ್ಯ ಮಾನ್ಯರು ಇದ್ದರು.

WhatsApp Group Join Now
Telegram Group Join Now
Share This Article