ಅಮರಾವತಿ, ಜುಲೈ 25: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಶುಕ್ರವಾರ ತಮ್ಮ ನಿವೃತ್ತಿಯ ನಂತರ ಯಾವುದೇ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮವಾದ ದಾರಾಪುರದಲ್ಲಿ ಸನ್ಮಾನ ಸ್ವೀಕರಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. “ನನ್ನ ನಿವೃತ್ತಿಯ ನಂತರ ನಾನು ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸಬಾರದು ಎಂದು ನಿರ್ಧರಿಸಿದ್ದೇನೆ. ನಿವೃತ್ತಿಯ ನಂತರ ನನಗೆ ಹೆಚ್ಚಿನ ಸಮಯ ಸಿಗುತ್ತದೆ. ಆದ್ದರಿಂದ ನಾನು ದಾರಾಪುರ, ಅಮರಾವತಿ ಮತ್ತು ನಾಗ್ಪುರದಲ್ಲಿ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸುತ್ತೇನೆ” ಎಂದು ಗವಾಯಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.