ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ, ಬಾಬಾಸಾಹೇಬ ಪಾಟೀಲ, ವಿ ಪ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.