ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ, ಡಿಸಿಎಂ ಡಿಕೆ

Ravi Talawar
ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ, ಡಿಸಿಎಂ ಡಿಕೆ
WhatsApp Group Join Now
Telegram Group Join Now

ಬೆಳಗಾವಿ, ಡಿಸೆಂಬರ್ 26: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದ್ದು, ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದರು. ನಂತರ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಎದುರು ಫೋಟೊ ತೆಗೆಸಿಕೊಂಡರು.

ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾದಿ ಉತ್ಸವಕ್ಕೆ ಚಾಲನೆ ನೀಡಿದರು. ಬೆಳಗಾವಿ ನಗರದ ಸರ್ದಾರ್​ ಮೈದಾನದಲ್ಲಿ ರಾಜ್ಯ ಮಟ್ಟದ ಖಾದಿ‌ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ನಡೆಯುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ನಡೆಯುತ್ತಿದೆ. ಸಿಎಂಗೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಸಚಿವರ ಸಾಥ್ ನೀಡಿದರು.

WhatsApp Group Join Now
Telegram Group Join Now
Share This Article